ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿ ಜಿಲ್ಲೆಯ ಕಾಪು ತಾಲೂಕಿನಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಕಾಪು ತಾಲೂಕಿನ ಎಲ್ಲ ಶಾಲಾ ಕಾಲೇಜುಗಳು ಹಾಗೂ ಅಂಗನವಾಡಿಗಳಿಗೆ ಇಂದು ರಜೆ ನೀಡಲಾಗಿದೆ.
ಮಳೆಯ ತೀವ್ರತೆ ಹೆಚ್ಚಿದ್ದು, ಮಕ್ಕಳ ಸುರಕ್ಷತಾ ದೃಷ್ಟಿಯಿಂದಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಉಳಿದಂತೆ ಎಲ್ಲಾ ಪದವಿ ಕಾಲೇಜು, ಸ್ನಾತಕೋತ್ತರ ಪದವಿ, ಡಿಪ್ಲಮಾ, ಇಂಜಿನಿಯರಿಂಗ್ ಹಾಗೂ ಐಟಿಐ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ.