ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಾದ್ಯಂತ ಬಿಸಿಲ ಬೇಗೆಯಿಂದ ಬೇಸತ್ತಿದ್ದ ಜನರಿಗೆ ನಿನ್ನೆ ಸಂಜೆ ಮಳೆಯ ಸಿಂಚನ ಬಂದಿದೆ. ಆದರೆ ನಿನ್ನೆ ಸುರಿದ ಮಳೆಯಿಂದ ಭಾರಿ ಅವಾಂತರವೊಂದು ಸಂಭವಿಸಿದೆ. ಗಾಳಿಯ ರಭಸಕ್ಕೆ ಕಾರು ಹಾಗೂ ಬೈಕ್ ಮೇಲೆ ಬೃಹತ್ ಮರ ಬಿದ್ದಿದೆ.
ಕೊಡಿಗೆಹಳ್ಳಿಯ ರೈಲ್ವೆ ಪ್ಯಾರಲ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮರ ಬಿದ್ದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಇನ್ನು, ಕಾರು ಕೂಡ ಡ್ಯಾಮೇಜ್ ಆಗಿದ್ದು, ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಬೈಕ್ ಸವಾರರನ್ನ ಕೊಡಿಗೆಹಳ್ಳ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿದೆ.
ಅಂದಹಾಗೆಯೇ ನಿನ್ನೆ ರಾಜ್ಯದ ಹಲವು ಭಾಗಗಳಲ್ಲಿ ಮೊದಲ ಮಳೆ ಸುರಿದಿದೆ. ಬೆಂಗಳೂರು ನಗರದಲ್ಲಿ ಒಟ್ಟು 4.3 ಮಿ.ಮೀ ಮಳೆ ದಾಖಲಾಗಿದೆ. ಬೆಂಗಳೂರು ನಗರದ ವಿದ್ಯಾಪೀಠದಲ್ಲಿ 20 ಮಿ.ಮೀ ಮಳೆ ಬಿದ್ದಿದೆ.