Monday, October 13, 2025

WEATHER | ಸೆ 22 ರವರೆಗೆ ಕರ್ನಾಟಕದಲ್ಲಿ ಮಳೆ, ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಳೆದ ಮೂರು ದಿನಗಳಿಂದ ಭಾರೀ ಮಳೆ ಆಗುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಸುರಿದ ಧಾರಾಕಾರ ಮಳೆಗೆ ಹಳ್ಳಗಳು ಉಕ್ಕಿಹರಿಯುತ್ತಿವೆ. ಜಮೀನುಗಳಿಗೂ ನೀರು ನುಗ್ಗಿ ಅಪಾರ ಬೆಳೆ ಹಾಳಾಗಿದೆ. ಈ ಮಧ್ಯೆ ಕರ್ನಾಟಕದಲ್ಲಿ ಇನ್ನೂ ಸೆ. 22 ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜೊತೆಗೆ ಕರಾವಳಿ ಜಿಲ್ಲೆಗಳು ಅಂದರೆ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ.

error: Content is protected !!