ಹೊಸದಿಗಂತ ಡಿಜಿಟಲ್ ಡೆಸ್ಕ್:
ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡಿರುವ ವಾಯಭಾರ ಕುಸಿತದ ಪರಿಣಾಮ ಮುಂದಿನ ನಾಲ್ಕು ದಿನಗಳ ಕಾಲ ಕೇರಳದ ಹಲವೆಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಗುರುವಾರ ಕೋಝಿಕ್ಕೋಡ್, ಕಣ್ಣೂರು ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕೆಲವು ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ 64.5 ಮಿ.ಮೀ ನಿಂದ 111.5 ಮಿ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಶುಕ್ರವಾರ ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ಕೇರಳ ಹಾಗೂ ದಕ್ಷಿಣ ತಮಿಳ್ನಾಡಿನ ಕರಾವಳಿಯಲ್ಲಿ ರಾತ್ರಿ 11:30 ರ ಬಳಿಕ 1 ರಿಂದ 1.5 ಮೀಟರ್ ಎತ್ತರದ ಅಲೆಗಳು ಏಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮೀನುಗಾರರು, ಕಡಲ ತೀರದ ನಿವಾಸಿಗಳು ಎಚ್ಚರದಿಂದಿರಬೇಕು. ಲಕ್ಷದ್ವೀಪ ಭಾಗದಲ್ಲಿ ಮೀನುಗಾರಿಕೆಗೆ ತೆರಳಬಾರದು ಎಂದು ರಾಷ್ಟ್ರೀಯ ಸಾಗರ ಮತ್ತು ವಾತಾವರಣ ಸಂಶೋಧನಾ ಕೇಂದ್ರ ಎಚ್ಚರಿಕೆ ನೀಡಿದೆ.