ಹೊಸದಿಗಂತ ವರದಿ, ಮಡಿಕೇರಿ:
ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಕಡಿಮೆ ಆಗಿರುವ ಹಿನ್ನೆಲೆಯಲ್ಲಿ ಗುರುವಾರದಿಂದ ಶಾಲಾ ಕಾಲೇಜುಗಳು ಎಂದಿನಂತೆ ಅರಂಭವಾಗಲಿವೆ.
ಹೆಚ್ಚಿನ ಮಳೆಯಿಂದ ಸಮಸ್ಯೆ ಇರುವ ಶಾಲೆಗಳಿಗೆ ಆಯಾಯ ವ್ಯಾಪ್ತಿಯ ಕ್ಷೇತ್ರ ಶಿಕ್ಷಣ ಅಧಿಕಾರಿಗಳೇ ರಜೆ ಘೋಷಣೆ ಮಾಡಲು ಅದೇಶ ಹೋರಡಿಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ ಎಂದು ಡಿಡಿಪಿಐ ಸಿ.ರಂಗಧಾಮಯ್ಯ ಅವರು ತಿಳಿಸಿದ್ದಾರೆ.