ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರಾವಳಿಯಲ್ಲಿ ಮಳೆಯ ಅವಾಂತರ ಮುಂದುವರಿದಿದೆ ಭಾರಿ ಗಾಳಿ ಮಳೆಗೆ ಮನೆ ಕುಸಿದು ಬಾಲಕ ಮೃತಪಟ್ಟಿರುವ ಘಟನೆ ದ.ಕ. ಜಿಲ್ಲೆಯ ಮಂಗಳೂರು ತಾಲೂಕಿನ ಜೋಕಟ್ಟೆ ಬಳಿ ನಡೆದಿದೆ.
ಮೃತ ಬಾಲಕನ್ನು ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ (17) ಎಂದು ಗುರುತಿಸಲಾಗಿದೆ.
ಭಾರಿ ಗಾಳಿ-ಮಳೆಗೆ ಮನೆಯ ಮೇಲೆ ತಡೆಗೋಡೆ ಕುಸಿದು ಈ ದುರಂತ ಸಂಭವಿಸಿದೆ. ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿಯಾಗಿರುವ ಶೈಲೇಶ್ ಕುಸಿತವಾದ ಮನೆಗೆ ಅತಿಥಿಯಾಗಿ ಬಂದಿದ್ದ. ಬುಧವಾರ ರಾತ್ರಿ ಮಂಗಳೂರು ಭಾಗದಲ್ಲಿ ಭಾರಿ ಮಳೆಯಾಗಿತ್ತು.
ಈ ಹಿನ್ನಲೆಯಲ್ಲಿ ಮನೆಯ ಪಕ್ಕದ ತಡೆಗೋಡೆ ಕುಸಿದು ಬಿದ್ದಿದೆ. ಪರಿಣಾಮ ಮನೆ ಸಂಪೂರ್ಣ ಕುಸಿದಿದೆ. ಮಣ್ಣಿನಡಿ ಸಿಲುಕಿ ಶೈಲೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಐವರು ಗಾಯಗೊಂಡಿದ್ದಾರೆ.