ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮಳೆಯಿಲ್ಲದೆ ಕಂಗಾಲಾಗಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ. ಆದರೆ ಕೆಲ ಭಾಗಗಳಲ್ಲಿ ಅತಿಯಾದ ಮಳೆ, ಇನ್ನುಳಿದ ಭಾಗಗಳಲ್ಲಿ ಮಳೆಯೇ ಇಲ್ಲದಂತಾಗಿ ಜನ ಈಗಲೂ ಹೈರಾಣಾಗಿದ್ದಾರೆ.
ಮಲೆನಾಡು ಭಾಗದಲ್ಲಿ ಮಳೆ ಹೆಚ್ಚಾಗಿದ್ದು, ಸಿಡಿಲು ಬಡಿದು ಶಿವಮೊಗ್ಗ (Shivamogga) ತಾಲೂಕಿನ ಹರಮಘಟ್ಟ ಗ್ರಾಮದಲ್ಲಿ ರೈತರೊಬ್ಬರು ಮೃತಪಟ್ಟಿದ್ದಾರೆ. ತೋಟದಲ್ಲಿ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದಾಗ ಸಿಡಿಲು ಬಡಿದು ರಾಕೇಶ್ ಕೊನೆಯುಸಿರೆಳೆದಿದ್ದಾರೆ.