ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಿಸೆಂಬರ್ 28ರವರೆಗೆ ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ,ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಧಾರವಾಡ ಹಾಗೂ ಬೆಳಗಾವಿ ವಿಮಾನ ನಿಲ್ದಾಣದಲ್ಲಿ 15.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಇಂದು ಬಿಸಿಲಿರಲಿದ್ದು ಡಿ.26ರ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.