Sunday, June 26, 2022

Latest Posts

ಮುಂಬೈನಲ್ಲಿ ಮತ್ತೆ ವರುಣನ ಆರ್ಭಟ: ರಸ್ತೆಗಳು ಜಲಾವೃತ, ವಾಹನ ಸವಾರರಿಗೆ ತೊಂದರೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಈಶಾನ್ಯ ಮಾರುತಗಳು ಸಕ್ರಿಯವಾಗಿದ್ದು, ಮುಂಬೈ ನಗರ ಸೇರಿದಂತೆ  ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ವರುಣನ ಆರ್ಟಭಟದಿಂದ  ಮುಂಬೈನ ಅಸಲ್ಫಾ ಪ್ರದೇಶದಲ್ಲಿ ಭೂಕುಸಿತ ಉಂಟಾಗಿದ್ದು, ಕೆಲವರು ಗಾಯಗೊಂಡಿದ್ದಾರೆ.

ಪರೆಲ್, ಅಂಧೇರಿ, ಭಾಂದೂಪ್ ಮತ್ತು ಇತರ ಕೆಲವು ಪ್ರದೇಶಗಳಲ್ಲಿ ನೀರು ತುಂಬಿಕೊಂಡಿದ್ದು, ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ. ವಾಹನ ಸವಾರರಿಗೆ ತೊಂದರೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಮುಂಬೈ ಭಾಗದಲ್ಲಿರುವ ಕೊಲಾಬಾ ವೀಕ್ಷಣಾಲಯದಲ್ಲಿನ ಮಾಹಿತಿ ಪ್ರಕಾರ, ಮಂಗಳವಾರ ಬೆಳಗ್ಗಿನ ಮಳೆ ದಾಖಲೆಯ ಪ್ರಕಾರ, 29.8 ಮಿ.ಮೀ. ಮಳೆಯಾಗಿದೆ. ಸಾಂತಾಕ್ರೂಜ್‌ ಪ್ರದೇಶದಲ್ಲಿರುವ ಹವಾಮಾನ ಇಲಾಖೆಯ ವೀಕ್ಷಣಾಲಯದಲ್ಲಿ 49 ಮಿ.ಮೀ. ಮಳೆಯಾಗಿರುವುದಾಗಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss