July 24, 2026
Friday, July 24, 2026
spot_img

WEATHER | ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ, ಈ ಎರಡು ಜಿಲ್ಲೆಗಳಲ್ಲಿ ಮಿಂಚು-ಗುಡುಗು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಏಪ್ರಿಲ್ 11ರವರೆಗೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದು ಹಾಗೂ ನಾಳೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮಿಂಚು ಹಾಗೂ ಗುಡುಗು ಸಹಿತ ಮಳೆಯಾಗಲಿದೆ ಎಂದು ಸೂಚಿಸಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಮಾಮೂಲಿ ವಾತಾವರಣವಿದೆ. ಮಧ್ಯಾಹ್ನದ ಬಿಸಿಲಿಗೆ ಜನ ಹೈರಾಣಾಗಿದ್ದಾರೆ. ಬೆಂಗಳೂರಿನಲ್ಲಿ ಮಳೆಯ ಲಕ್ಷಣಗಳು ಕಾಣಿಸುತ್ತಿಲ್ಲ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !