ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮುಂದಿನ ಮೂರು ಗಂಟೆಗಳಲ್ಲಿ ಕರ್ನಾಟಕದ ಬೆಳಗಾವಿ, ಚಿಕ್ಕಮಗಳೂರು ಮತ್ತು ಕೊಡಗು, ಧಾರವಾಡ, ಗದಗದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಪ್ರಸ್ತುತ ಹವಾಮಾನ ಪರಿಸ್ಥಿತಿಗಳು ವೈವಿಧ್ಯಮಯವಾಗಿದ್ದು, ಮುಂದಿನ ಏಳು ದಿನಗಳವರೆಗೆ ವಿವಿಧ ಜಿಲ್ಲೆಗಳಲ್ಲಿ ಮಳೆ ಮತ್ತು ಒಣ ಹವೆಯ ಮಿಶ್ರ ಸ್ಥಿತಿ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.
ಗಾಳಿ ಪ್ರಭಾವದಿಂದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ವಿಜಯಪುರ, ಚಾಮರಾಜನಗರ, ಕಲಬುರಗಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಮಳೆ ಸಾಧ್ಯತೆ ಇದೆ. ರಾಜ್ಯದ ಇತರ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ನಾಳೆ ದಕ್ಷಿಣ ಕನ್ನಡ, ಬೆಳಗಾವಿ, ಕೊಡಗು, ಮೈಸೂರು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕೆಲವೆಡೆ ಲಘು ಮಳೆಯಾಗುವ ಸಂಭವ ಇದೆ.