WEATHER | ರಾಜ್ಯದ ಈ ಜಿಲ್ಲೆಗಳಲ್ಲಿ ಮೇ 11ರವರೆಗೂ ಮಳೆ, ಸಂಜೆ ಮೇಲೆ ವರ್ಷಧಾರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕರ್ನಾಟಕದ ಹಲವೆಡೆ ಮೇ11ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎರಡು ದಿನಗಳ ಬಿಡುವು ಪಡೆದು ಮೇ 7ರಿಂದ ಮಳೆ ಮತ್ತೆ ಚುರುಕಾಗಲಿದೆ.

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮನರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಭಾನುವಾರ ಮಂಗಳೂರಿನಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 42.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!