ಹೊಸದಿಗಂತ ವರದಿ,ಕಾರವಾರ:
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀಮಳೆ ಮುಂದುವರಿದ ಹಿನ್ನೆಲೆಯಲ್ಲಿ ಶನಿವಾರ (ಆಗಸ್ಟ್ 3) ಉತ್ತರ ಕನ್ನಡ ಜಿಲ್ಲೆಯ 9 ತಾಲೂಕಿನ ಶಾಲೆ-ಪಿಯು ಕಾಲೇಜ್ ಹಾಗೂ ಐಟಿಐ ಮತ್ತು ಡಿಪ್ಲೋಮಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ನೀಡಿದ್ದಾರೆ.
ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕಿನ ಎಲ್ಲಾ ಶಾಲೆಗಳು- ಪದವಿ ಪೂರ್ವ ಕಾಲೇಜುಗಳು ಹಾಗೂ ಐಟಿಐ ಮತ್ತು ಡಿಪ್ಲೋಮಾ ಕಾಲೇಜುಗಳಿಗೆ ಶನಿವಾರ ಘೋಷಿಸಲಾಗಿದೆ.