ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡ ಮತ್ತು ದೆಹಲಿಯಲ್ಲಿ ಮಳೆಯಾಗುತ್ತಿದ್ದು, ನಾಳೆಯೂ ಮುಂದುವರಿಯುವ ಸಾಧ್ಯತೆ ಇದೆ. ಅಲ್ಲದೇ, ಪಶ್ಚಿಮ ಹಿಮಾಲಯದಲ್ಲಿ ಹಿಮಪಾತ ಎಚ್ಚರಿಕೆಯನ್ನು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಇಂದು ಪಶ್ಚಿಮ ಹಿಮಾಲಯದ ಪ್ರದೇಶದಲ್ಲಿ ಸಾಕಷ್ಟು ವ್ಯಾಪಕವಾದ ಮಳೆ ಮತ್ತು ಹಿಮಪಾತ ಸಂಭವಿಸುವ ಸಾಧ್ಯತೆಯಿದೆ.
ಇಂದು ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರಾಖಂಡ, ಹಿಮಾಚಲ ಪ್ರದೇಶ, ಪಶ್ಚಿಮ ಉತ್ತರ ಪ್ರದೇಶ, ಪೂರ್ವ ರಾಜಸ್ಥಾನ, ಮಧ್ಯ ಮಹಾರಾಷ್ಟ್ರ, ಮರಾಠವಾಡದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಚದುರಿದ ಮಳೆಯ ಮುನ್ಸೂಚನೆಯನ್ನು ನೀಡಲಾಗಿದೆ.
ಮುಂದಿನ 3 ದಿನಗಳಲ್ಲಿ ವಾಯುವ್ಯ ಭಾರತದಲ್ಲಿ ಕನಿಷ್ಠ ತಾಪಮಾನದಲ್ಲಿ ಸುಮಾರು 2 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ. ಕ್ರಮೇಣ 2-3 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗಲಿದೆ ಎಂದು ಐಎಂಡಿ ಹೇಳಿದೆ.