ಹೊಸದಿಗಂತ ಡಿಜಿಟಲ್ ಡೆಸ್ಕ್:
ನೆಲಮಂಗಲ ನಗರದ ಸುತ್ತಮುತ್ತ ಭಾರೀ ಮಳೆಯಾಗಿದ್ದು, ರಸ್ತೆಗಳಲ್ಲಿ ನೀರು ತುಂಬಿಕೊಂಡು ಭಾರೀ ಅವಾಂತರವೇ ಸೃಷ್ಟಿಯಾಗಿದೆ.
ಅರ್ಧ ಗಂಟೆಯಿಂದ ಮಳೆ ಸುರಿಯುತ್ತಿದ್ದು, ಒಂದು ಅಡಿ ನೀರು ರಸ್ತೆ ಮೇಲೆ ನಿಂತಿದೆ. ಇದರಿಂದ ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡಿದೆ. ವಾಹನ ಸವಾರರು ಪರದಾಡುತ್ತಿದ್ದಾರೆ. ಇನ್ನು ಮಳೆ ನೀರು ರಸ್ತೆ ಮೇಲೆ ನಿಂತ ಕಾರಣ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ.