ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲಿ ನಿರಂತರ ಮಳೆಯಾಗುತ್ತಿದ್ದು, ಇದೆ ರೀತಿ ಕೆಲ ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ.
ತಮಿಳುನಾಡು, ತೆಲಂಗಾಣದಲ್ಲಿ ಚಂಡಮಾರುತ ಎದ್ದಿರುವ ಕಾರಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನು ಕೆಲ ದಿನ ತುಂತುರು ಮಳೆಯಾಗುವ ಸಾಧ್ಯತೆ ಇದೆ ಅಂತ ಐಎಂಡಿ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಸಂಜೆ ಹೊತ್ತಿಗೆ ಮಳೆ ಆರಂಭವಾಗಿ ಮಧ್ಯರಾತ್ರಿವರೆಗೂ ಸುರಿಯುತ್ತಿದೆ. ಕೇವಲ ಬೆಂಗಳೂರು ಮಾತ್ರವಲ್ಲದೆ ದಕ್ಷಿಣ ಕರ್ನಾಟಕ ಮತ್ತು ಒಳನಾಡು ಭಾಗಗಳಲ್ಲಿ ಹಾಗೂ ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಚಿಕ್ಕಬಳ್ಳಾಪುರ ಸೇರಿ ಕರ್ನಾಟಕದ ಕೆಲವು ಜಿಲ್ಲೆಗಳಲ್ಲೂ ಹಗುರ ಮಳೆಯಾಗಿದೆ.
ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಬಿಸಿಲನ ಬೇಗೆ ನಡುವೆಯೂ ಮಳೆ ತಂಪೆರೆಯುತ್ತಿದೆ. ಆದರೆ ಇದೆ ರೀತಿ ಮಳೆ ಮುಂದುವರೆದರೆ ಮುಂದಿನ ದಿನಗಳಲ್ಲಿ ಅನಾರೋಗ್ಯ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಜನರು ಸಹ ಆರೋಗ್ಯದ ಮೇಲೆ ಹೆಚ್ಚಿನ ನಿಗಾ ವಹಿಸಬೇಕಿದೆ.