October 5, 2026
Monday, October 5, 2026
spot_img

WEATHER | ಬರಲೋ ಬೇಡ್ವೋ ಎಂದು ಬೀಳುತ್ತಿರುವ ಮಳೆ, ಏಳು ದಿನ ಅಲ್ಲಲ್ಲಿ ವರ್ಷಧಾರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಆದರೆ ಹಲವು ಜಿಲ್ಲೆಗಳಲ್ಲಿ ಹನಿಮಳೆಯೂ ಬಿದ್ದಿಲ್ಲ. ಇನ್ನು ಒಂದೊಂದು ಜಿಲ್ಲೆಯಲ್ಲಿ ಮಾತ್ರ ಬರಲೋ ಬೇಡ್ವೋ ಎನ್ನುವಂತೆ ಮಳೆ ಬೀಳುತ್ತಿದೆ.

ಮುಂದಿನ 7 ದಿನ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು, ನಾಳೆ ಹಾಗೂ ಆಗಸ್ಟ್ 1ರವರೆಗೆ ಅಲ್ಲಲ್ಲಿ ಭಾರಿ ಮಳೆ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ವರದಿ ಮಾಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Must Read