WEATHER | ರಾಜ್ಯದ 11 ಜಿಲ್ಲೆಗಳಲ್ಲಿ ಇಂದು ವರ್ಷಧಾರೆ, ನಿಮ್ಮೂರಲ್ಲೂ ಮಳೆ ಇದೆಯಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ.

ಕ್ಯಾಸಲ್​ರಾಕ್, ಜೋಯಿಡಾ, ಕುಮಟಾ, ಯಲ್ಲಾಪುರ, ಕಾರ್ಕಳ, ಸಂಕೇಶ್ವರ, ಶಿರಹಟ್ಟಿ, ಲಕ್ಷ್ಮೀಪುರ, ಧಾರವಾಡ, ಕೆಆರ್ ನಗರ, ಹುಂಚದಕಟ್ಟೆ, ಶೃಂಗೇರಿ, ಜಯಪುರ, ಸಾಗರದಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಧಾರವಾಡದಲ್ಲಿ 18.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 20.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!