WEATHER | ರಾಜ್ಯದಲ್ಲಿ ಸೆ.13ರವರೆಗೆ ಈ ಆರು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ..

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಸೆಪ್ಟಂಬರ್ 13 ರವರೆಗೆ ಆರು ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳ ಮೇಲೆ ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿನ ಹವಾಮಾನ ವೈಪರಿತ್ಯಗಳ ಪ್ರಭಾವ ಮುಂದುವರಿದಿದ್ದು, ಪರಿಣಾಮ ಮುಂದಿನ ಮೂರು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಜೋರು ಗಾಳಿ ಸಹಿತ ಸಾಧಾರಣದಿಂದ ಭಾರೀ ಮಳೆ ಸಾಧ್ಯತೆ ಇದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಹಾಗೂ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಎರಡರಿಂದ ಮೂರು ದಿನ ಭಾರೀ ಮಳೆ ಆಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಆರಂಭವಾದಾಗಿನಿಂದ ಅಂದರೆ ಜೂನ್ ಅಂತ್ಯದಿಂದ ಈವರೆಗೆ ಈ ಎರಡು ಭಾಗಗಳಲ್ಲಿ ಹೆಚ್ಚಿನ ಮಳೆ ದಾಖಲಾಗಿದೆ.

ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಧಾರವಾಡ, ವಿಜಯಪುರ, ಹಾವೇರಿ, ಕೊಪ್ಪಳ, ಗದಗ, ರಾಯಚೂರು, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಅಷ್ಟಾಗಿ ಜೋರು ಮಳೆ ಪ್ರಭಾವ ಇಲ್ಲದಿದ್ದರೂ, ಆಗೊಮ್ಮೆ ಈಗೊಮ್ಮೆ ತುಂತುರು ಮಳೆಯ ಸಾಧ್ಯತೆ ಇದೆ.

ಅದೇ ರೀತಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ಹಾಸನ, ತುಮಕೂರು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಲಘು ಮಳೆ, ಕೆಲವೊಮ್ಮೆ ವ್ಯಾಪಕ ಮಳೆ ಸಾಧ್ಯತೆ ಇದೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!