ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಇಂದು ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಪ್ರಮಾಣವಚನ ಕಾರ್ಯಕ್ರಮಕ್ಕೆ ವರುಣನ ಸಾಥ್ ಕೂಡ ಸಿಗುವ ಸಾಧ್ಯತೆ ಇದೆ.
ಬಿಸಿಲಿನಿಂದ ಸಿಲಿಕಾನ್ ಸಿಟಿ ಕಂಗಾಲಾಗಿದ್ದು, ಇಂದು ಮಳೆ ಸಾಧ್ಯತೆ ಇದೆ, ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ನಾಳೆ ಹಾಗೂ ನಾಡಿದ್ದು ರಾಜಧಾನಿಯಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ.