ತಮಿಳುನಾಡಿನಲ್ಲೂ ಮಳೆ ಆರ್ಭಟ: ಸಿಡಿಲು ಬಡಿದು ಇಬ್ಬರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನೆರೆರಾಜ್ಯ ತಮಿಳುನಾಡಿನಲ್ಲಿಯೂ ಭಾರೀ ಮಳೆಯಾಗುತ್ತಿದ್ದು,  ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ.

ತಮಿಳುನಾಡಿನ ತಿರುಚಿ, ಕನ್ಯಾಕುಮಾರಿ, ಊಟಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಇಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ್ದು, ಈ ಮೂಲಕ ಮಳೆಯಿಂದಾಗಿ ಕಳೆದೊಂದು ತಿಂಗಳಲ್ಲಿ ಮೃತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.

ಈ ಹಿಂದೆ ತೆಂಕಾಶಿ ಜಿಲ್ಲೆಯ ಕುಟ್ರಾಲಂ ಜಲಪಾತದಲ್ಲಿ 17 ವರ್ಷದ ಬಾಲಕನೊಬ್ಬ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ. ಮಧುರೈನಲ್ಲಿ ಛಾವಣಿ ಕುಸಿದು ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದ. ಇದುವರೆಗೆ 7 ಗುಡಿಸಲುಗಳು ಹಾಗೂ 14 ಜಾನುವಾರುಗಳಿಗೆ ಹಾನಿಯಾಗಿದೆ.

ಮೃತರ ಗುರುತು ಪತ್ತೆಯಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!