September 11, 2026
Friday, September 11, 2026
spot_img

WEATHER | ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ ಸಾಧ್ಯತೆ, ತಂಪಾದ ವಾತಾವರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ ನಾಲ್ಕು ದಿನ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಹಾಗೂ ಮಿಂಚು ಸಹಿತ ಮಳೆ ಬೀಳಲಿದೆ.

ಇದು ಎಲ್ಲ ಜಿಲ್ಲೆಗಳ ಪರಿಸ್ಥಿತಿ ಅಲ್ಲ, ಹಲವು ಜಿಲ್ಲೆಗಳಲ್ಲಿ ಮತ್ತದೇ ಬಿಸಿಲು ಕಾಡಲಿದೆ. ಹವಾಮಾನದಲ್ಲಿ ಬದಲಾವಣೆಗಳು ಸಂಭವಿಸುತ್ತಿದ್ದು, ಜನ ಆರೋಗ್ಯದ ಕಡೆ ಹೆಚ್ಚಿನ ಗಮನ ವಹಿಸುವುದು ಉತ್ತಮವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !