ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಮಲೆನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡು ವ್ಯಾಪ್ತಿಯ ಭಾಗಗಳಲ್ಲಿ ಮುಂದಿನ 2 ದಿನಗಳ ಕಾಲ ಗುಡುಗು ಸಹಿತ ಮಹಿಳೆಯಾಗುವ ಸಾಧ್ಯತೆಗಳಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡದಲ್ಲಿ ಎರಡು ದಿನಗಳಿಂದ ಮಳೆ ಸುರಿದಿದ್ದು, ಜಿಲ್ಲೆಯಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು ಜಿಲ್ಲೆ ಸೇರಿ, ಉತ್ತರ ಒಳನಾಡಿನ ಕೆಲವು ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.