Saturday, September 27, 2025

ನವರಾತ್ರಿಯ ದಾಂಡಿಯಾ ಸಂಭ್ರಮಕ್ಕೆ ಮಳೆರಾಯ ಅಡ್ಡಿ ಸಾಧ್ಯತೆ: ಆರೆಂಜ್ ಅಲರ್ಟ್ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂಬೈ ಸೇರಿದಂತೆ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

ಮುಂಬೈನಲ್ಲಿ ಗುಡುಗು, ಮಿಂಚು ಸಹಿತ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಪಾಲ್ಘರ್, ಪುಣೆ, ಥಾಣೆ ಮತ್ತು ರಾಯಗಡ್ ಸೇರಿದಂತೆ ಹಲವೆಡೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇಂದು ಬೆಳಗ್ಗೆಯಿಂದಲೂ ಮುಂಬೈ ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಪಾಲ್ಘರ್, ಥಾಣೆ ಮತ್ತು ರಾಯಗಡ್‌ನಲ್ಲಿ ಸೆ.29ರವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ.