June 25, 2026
Thursday, June 25, 2026
spot_img

ವಾರಪೂರ್ತಿ ಮಳೆ ಮೂಡ್: ಮತ್ತೆ ಚುರುಕಾದ ಮುಂಗಾರು, ರಾಜ್ಯದ ಹಲವು ಜಿಲ್ಲೆಗಳಿಗೆ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಮುಂಗಾರು ಮಳೆ ಮತ್ತೊಮ್ಮೆ ಬಿರುಸು ಪಡೆದಿದ್ದು, ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆಯ ಚಟುವಟಿಕೆ ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿ ಭಾಗಗಳಲ್ಲಿ ಭಾರಿ ಮಳೆಯೊಂದಿಗೆ ಬಲವಾದ ಗಾಳಿಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಕರಾವಳಿಗೆ ಭಾರಿ ಮಳೆ ಎಚ್ಚರಿಕೆ

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ.

ಇದನ್ನೂ ಓದಿ:

ಬೆಂಗಳೂರು ಹವಾಮಾನ ಹೇಗಿರಲಿದೆ?

ರಾಜಧಾನಿ ಬೆಂಗಳೂರಿನಲ್ಲಿ ವಾರಪೂರ್ತಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ತಾಪಮಾನವು ಕನಿಷ್ಠ 20 ಡಿಗ್ರಿ ಮತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್ ನಡುವೆ ಇರಲಿದೆ.

ಮುಂದಿನ ವಾರದ ಮೇಲೂ ಕಣ್ಣಿಟ್ಟ ಹವಾಮಾನ ಇಲಾಖೆ

ಜೂನ್ ಅಂತ್ಯದವರೆಗೆ ಮಳೆ ಚಟುವಟಿಕೆ ಮುಂದುವರಿಯುವ ಸಾಧ್ಯತೆ ಇದ್ದು, ಮುಂದಿನ ದಿನಗಳ ವಿಸ್ತೃತ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ಶೀಘ್ರದಲ್ಲೇ ಪ್ರಕಟಿಸಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !