ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಯ ನೇತ್ರಾವತಿ, ಕುಮಾರಧಾರ ಮತ್ತು ಫಲ್ಗುಣಿ ನದಿಗಳು ಉಕ್ಕಿ ಹರಿಯುತ್ತಿವೆ.
ಜಿಲ್ಲೆಯ ಬಹುತೇಕ ಕಡೆಗಳಲ್ಲಿ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.
ಮುಂದಿನ ೭ ದಿನಗಳ ಕಾಲ ಮಳೆ ಅರ್ಭಟ ಮುಂದುವರಿಯಲಿದೆ. ಹೀಗಾಗಿ ಇಂದು ಮತ್ತು ನಾಳೆ (ಜು.24, 25) ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ಜಿಲ್ಲೆಗಳಲ್ಲಿ 204 .4 ಮಿಲಿ ಮೀಟರ್‌ಗಿಂತಲೂ ಅಧಿಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.