ತಮಿಳುನಾಡಿನಲ್ಲಿ ಮತ್ತೆ ಮಳೆಯೋ ಮಳೆ, ಮೂರು ಸಾವು, ಸಾಕಷ್ಟು ನೋವು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ತಮಿಳುನಾಡಿನಲ್ಲಿ ಮಳೆಯ ಅಬ್ಬರ ಇನ್ನೂ ಮುಂದುವರಿದಿದ್ದು, ಮಂಗಳವಾರ ಸುರಿದ ಮಳೆಗೆ ಮೂರು ಮಂದಿ ಮೃತಪಟ್ಟಿದ್ದಾರೆ.

ತಮಿಳುನಾಡಿನಲ್ಲಿ ಮುಂದುವರಿದ ಭಾರಿ ಮಳೆ: ಮೂವರು ಸಾವು, 4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ಕನ್ಯಾಕುಮಾರಿ, ತಿರುನಲ್ವೇರಿ, ತೂತುಕುಡಿ ಹಾಗೂ ತೆಂಕಶಿಯಲ್ಲಿ ಅತಿ ಹೆಚ್ಚು ಮಳೆ ಬೀಳುತ್ತಿದೆ. ಭಾರತೀಯ ಹವಾಮಾನ ಇಲಾಖೆ ಈ ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

Explained: Why is it raining so heavily in and around Tamil Nadu - India  Todayತಮಿಳುನಾಡು, ಪುದುಚೆರಿ ಹಾಗೂ ಕಾರೈಕಲ್‌ನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇತ್ತೀಚೆಗಷ್ಟೇ ತಮಿಳುನಾಡಿಗೆ ಮಿಂಚೌಂಗ್ ಚಂಡಮಾರುತ ಅಬ್ಬರಿಸಿತ್ತು. ಮಳೆ ಬಿಡುವು ನೀಡದೇ ಸುರಿಯುತ್ತಿದ್ದು, ಜನರು ಹೈರಾಣಾಗಿದ್ದಾರೆ.

Tamil Nadu Weather Update: IMD predicts heavy rainfall in THESE districts  for next 2 days. Details here | Mintಮನೆಗಳಲ್ಲಿ ಸಿಲುಕಿದ್ದ ಜನರನ್ನು ಸುರಕ್ಷಿತವಾಗಿ ಬೇರೆ ತಾಣಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಭಾರೀ ಮಳೆಯಿಂದಾಗಿ ರಸ್ತೆಗಳೆಲ್ಲ ನದಿಗಳಂತಾಗಿದ್ದು, ಮನೆಗಳಿಗೆ ನೀರು ನುಗ್ಗಿದೆ. ಮಳೆಯಿಂದಾಗಿ ವಿದ್ಯುತ್ ಪೂರೈಕೆ, ಮೊಬೈಲ್ ನೆಟ್‌ವರ್ಕ್ ಇಲ್ಲದಂತಾಗಿದೆ.

Heavy Rainfall And Thunderstorms Lashes Tamil Nadu, Schools Closed In 5  Districtsಮೂರು ಪ್ರತ್ಯೇಕ ಅವಘಡಗಳಲ್ಲಿ ಮೂವರು ಮೃತಪಟ್ಟಿದ್ದಾರೆ. ಮೃತರ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!