ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 3 ದಿನ ಮಳೆಯೋ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂಗಾರು ಕೈ ಹಿಡಿಯುವ ಸಾಧ್ಯತೆಯಿಂದ ರೈತರಿಗೆ ಖುಷಿಯಾಗಿದೆ, ಅರಬ್ಬೀ ಸಮುದ್ರದಲ್ಲಿ ಸೃಷ್ಟಿಯಾದ ಸುಳಿಗಾಳಿಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎಡೆಬಿಡದೆ ಮಳೆ ಸುರಿದಿದೆ.

ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಅವಾಂತರ ಸೃಷ್ಟಿಯಾಗಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ, ಅಂಡರ್‌ಪಾಸ್‌ನಲ್ಲಿ ನೀರು ನಿಂತಿದ್ದು, ಪ್ರಯಾಣಿಕರು ಕಷ್ಟಪಟ್ಟಿದ್ದಾರೆ.

ಇದೇ ರೀತಿ ಇನ್ನೂ ಮೂರು ದಿನ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಗುಡುಗು, ಗಾಳಿ ಸಹಿತ ಭಾರೀ ಮಳೆಯಾಗಲಿದೆ ಎನ್ನಲಾಗಿದೆ. ಕರಾವಳಿ ಭಾಗದಲ್ಲಿಯೂ ಮಳೆ ಜೋರಾಗಲಿದ್ದು, ತಗ್ಗುಪ್ರದೇಶದಲ್ಲಿ ವಾಸಿಸುವವರಿಗೆ ಎಚ್ಚರಿಕೆ ನೀಡಲಾಗಿದೆ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಬೆಂಗಳೂರು ಪೂರ್ವ ವಲಯ-1, ಮಹದೇವಪುರ ವಲಯ-1, ಬೆಂಗಳೂರು ದಕ್ಷಿಣ ವಲಯದಲ್ಲಿ ಎರಡು ಮರಗಳು ಧರೆಗುರುಳಿ ಟ್ರಾಫಿಕ್ ಜಾಮ್ ಆಗಿದೆ.

ಎಲ್ಲೆಲ್ಲಿ ಮಳೆ?
ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಹಾಸನ, ಕೋಲಾರ, ರಾಮನಗರ, ಚಿತ್ರದುರ್ಗ, ದಾವಣಗೆರೆ,ಕೊಡಗು, ಕೋಲಾರ, ವಿಜಯನಗರ, ಮೈಸೂರು, ಮಂಡ್ಯ, ಕೊಪ್ಪಳ,ರಾಯಚೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿಯಲ್ಲಿ ಮಳೆಯಾಗಲಿದೆ.

ಡಿಸಿಎಂ ವಾರ್‌ರೂಂಗೆ ಭೇಟಿ
 ರಾಜಧಾನಿ ಬೆಂಗಳೂರಿಗರು ಮಳೆಯಿಂದಾಗಿ ಹೆಚ್ಚು ಸಮಸ್ಯೆ ಅನುಭವಿಸಿದ್ದಾರೆ. ಮನೆಗಳಿಗೆ ನೀರು ನುಗ್ಗಿದ್ದು, ಕೆಳಸೇತುವೆಗಳಲ್ಲಿ ನೀರು ತುಂಬಿದ್ದು, ಈ ಬಗ್ಗೆ ಮಾಹಿತಿ ಪಡೆಯಲು ಡಿಸಿಎಂ ಡಿಕೆ ಶಿವಕುಮಾರ್ ಬಿಬಿಎಂಪಿ ಕೇಂದ್ರ ಕಚೇರಿಯ ವಾರ್‌ರೂಂಗೆ ಭೇಟಿ ನೀಡಿದ್ದಾರೆ. ಎಂಟೂ ವಲಯದ ಅಧಿಕಾರಿಗಳಿಗೆ ಕರೆ ಮಾಡಿ, ಅಲ್ಲಿನ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದಾರೆ, ಯಾವ ಸಮಸ್ಯೆಯೂ ಆಗದಂತೆ ನೋಡಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!