ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಾದ್ಯಂತ ಮೇ 13ರಿಂದ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 12ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.