ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಾದ್ಯಂತ ಮತ್ತೆ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ಬೆಂಗಳೂರಲ್ಲಿ ರಾತ್ರಿಯಿಡಿ ವರುಣ ಅಬ್ಬರಿಸಿದ್ದಾರೆ. ಮಧ್ಯರಾತ್ರಿ 2 ಗಂಟೆಗಳ ಭಾರೀ ಮಳೆಯಾಗಿದ್ದು, ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದೆ. ಒಂದು ರಾತ್ರಿ ಮಳೆ ನಗರದ ಹಲವೆಡೆ ನಾನಾ ಅವಾಂತರ ಸೃಷ್ಟಿಸಿದೆ.
ನಗರದ ಹಲವೆಡೆ ಸುರಿದ ಭಾರೀ ಮಳೆಗೆ ಬೃಹತ್ ಮರಗಳು ರಸ್ತೆಗೆ ಉರುಳಿ ಬಿದ್ದಿವೆ. ಲಾಲ್‌ಭಾಗ್ ರಸ್ತೆ ಊರ್ವಶಿ ಥಿಯೇಟರ್ ಬಳಿ ಬೃಹದಾಕಾರದ ಮರ ಬಿದ್ದಿದ್ದು, ರಸ್ತೆ ಬ್ಲಾಕ್ ಆಗಿದೆ. ಮರ ಬಿದ್ದು ವಾಹನ ಸಂಚಾರಕ್ಕೆ ಅಡಚಣೆ ಆಗ್ತಿದೆ. ಆದ್ರೆ ಮರ ತೆರವುಗೊಳಿಸಲು ಇನ್ನೂ ಜಿಬಿಎ ಸಿಬ್ಬಂದಿ ಸ್ಥಳಕ್ಕೆ ಬಂದಿಲ್ಲ.
ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗೂ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದ್ದು, ಇಂದು ಕೂಡ ಸಿಲಿಕಾನ್ ಸಿಟಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಇಂದು ಕೂಡ ಮಳೆಯ ಆರ್ಭಟ ಮುಂದುವರಿಯವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಇಂದು (ಸೆಪ್ಟೆಂಬರ್ 18) ರಾಜ್ಯ ರಾಜಧಾನಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.