March 14, 2026
Saturday, March 14, 2026
spot_img

ನಾಳೆ ಕರ್ನಾಟಕಕ್ಕೆ ಮಳೆ ‘ಪ್ಯಾಕೇಜ್’: ಬೆಂಗಳೂರಿಗೆ ಮಿಂಚು-ಗುಡುಗಿನ ಎಚ್ಚರಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ವರುಣನ ಅಬ್ಬರ ಹೆಚ್ಚಾಗಲಿದ್ದು, ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮಲೆನಾಡು ಮತ್ತು ಘಟ್ಟ ಪ್ರದೇಶಗಳಲ್ಲಿ ಉತ್ತಮ ಮಳೆ ಮುಂದುವರಿಯಲಿದ್ದು, ಇದರ ಜೊತೆಗೆ ಕಲ್ಯಾಣ ಮತ್ತು ಉತ್ತರ ಕರ್ನಾಟಕ ಭಾಗದಲ್ಲೂ ವರುಣಾರ್ಭಟ ಇರಲಿದೆ. ಹಳೆ ಮೈಸೂರು ಮತ್ತು ಬೆಂಗಳೂರು ಭಾಗದಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ನಾಳೆ ಸಾಧಾರಣ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇರುವ ಜಿಲ್ಲೆಗಳು ಇಂತಿವೆ:

ಕರಾವಳಿ ಮತ್ತು ಮಲೆನಾಡು: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಕೊಡಗು, ಮತ್ತು ಚಿಕ್ಕಮಗಳೂರು.

ದಕ್ಷಿಣ ಒಳನಾಡು: ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು.

ಉತ್ತರ ಒಳನಾಡು: ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಯಾದಗಿರಿ, ಕಲಬುರಗಿ, ರಾಯಚೂರು, ಬಳ್ಳಾರಿ.

ಒಣ ಹವೆ ಇರುವ ಜಿಲ್ಲೆಗಳು:

ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದ್ದು, ಕೆಲವೆಡೆ ಮಾತ್ರ ಮೋಡ ಕವಿದ ವಾತಾವರಣ ಇರಲಿದೆ.

ರಾಜಧಾನಿ ಬೆಂಗಳೂರು ನಗರದಲ್ಲಿ ನಾಳೆ ಸಾಧಾರಣ ಮಳೆಯ ನಿರೀಕ್ಷೆ ಇದೆ. ಗುಡುಗು ಮತ್ತು ಮಿಂಚು ಸಹಿತ ವರುಣನ ಆಗಮನದ ಸಾಧ್ಯತೆ ಹೆಚ್ಚಿದ್ದು, ಶೇಕಡಾ 86ರಿಂದ 100ರಷ್ಟು ಮಳೆ ಆಗಬಹುದು ಎಂದು ಅಂದಾಜಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !