ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಒಂದು ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಬೆಂಗಳೂರಿನಲ್ಲಿ ಒಣಹವೆ ಇರಲಿದ್ದು, ಮೋಡಕವಿದ ವಾತಾವರಣವಿರುತ್ತದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಕಲಬುರಗಿಯಲ್ಲಿ 39.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರದಲ್ಲಿ ಇಂದು ಹೆಚ್ಚಿನ ಮಳೆಯಾಗಲಿದೆ. ಸೋಮವಾರ ಬಂಡೀಪುರ, ಶಿರಸಿಯ ಕೆಲವು ಪ್ರದೇಶಗಳು, ಎಂಎಂಹಿಲ್ಸ್ನಲ್ಲಿ ಮಳೆಯಾಗಿದೆ. ಕಾರವಾರದಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿದೆ.
ಬೆಂಗಳೂರಿನ ಎಚ್ಎಎಲ್ನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.