ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ-ಪಾಕಿಸ್ತಾನ್ ನಡುವಣ ಸೂಪರ್ ಫೋರ್ ಹಂತದ ಪಂದ್ಯಕ್ಕೆ ವರುಣ ಕಾಡಿದ್ದಾನೆ. ಬರೋಬ್ಬರಿ ಒಂದೂವರೆ ಗಂಟೆ ಸುರಿದ ಮಳೆಯಿಂದ ಮೈದಾನ ಸಂಪೂರ್ಣ ನೀರಾಗಿದ್ದು,ಈ ಹಿನ್ನೆಲೆ ಪಂದ್ಯವನ್ನು ಸೋಮವಾರಕ್ಕೆ ಮುಂದೂಡಲಾಗಿದೆ.
ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾಗೆ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಸಿಡಿಲಬ್ಬರದ ಆರಂಭ ಒದಗಿಸಿದ್ದರು.
ಟೀಮ್ ಇಂಡಿಯಾ 24.1 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು 147 ರನ್ ಕಲೆಹಾಕಿತ್ತು. ಇದೀಗ ಮಳೆಯ ಕಾರಣ ಪಂದ್ಯವನ್ನು ಸೋಮವಾರಕ್ಕೆ ಮುಂದೂಡಲಾಗಿದೆ.
ಈಗಾಗಲೇ 24.1 ಓವರ್ಗಳನ್ನು ಆಡಿರುವ ಟೀಮ್ ಇಂಡಿಯಾ ಉಳಿದ ಓವರ್ಗಳನ್ನು ಆಡಲಿದೆ. ಅಂದರೆ ಭಾನುವಾರ ಪಂದ್ಯವು ಎಲ್ಲಿ ಕೊನೆಗೊಂಡಿತ್ತೊ ಅಲ್ಲಿಂದಲೇ ಮ್ಯಾಚ್ ಶುರುವಾಗಲಿದೆ. ಅಂದರೆ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಇನಿಂಗ್ಸ್ ಆರಂಭಿಸಲಿದ್ದಾರೆ.