ಕಾಸರಗೋಡು ಜಿಲ್ಲೆಯಲ್ಲಿ ಮುಂದುವರಿದ ಧಾರಾಕಾರ ಮಳೆ: ಶಾಲೆಗಳಿಗೆ ರಜೆ

ಹೊಸದಿಗಂತ ವರದಿ ಕಾಸರಗೋಡು:

ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ಕಳೆದ 24 ಗಂಟೆಗಳಲ್ಲಿ ಭಾರೀ ಮಳೆಯಾಗಿದ್ದು, ಮುಂದಿನ ಕೆಲವು ಗಂಟೆಗಳ ಕಾಲ ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ನೀಡಿದೆ.

ಈ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುನ್ನೆಚ್ಚರಿಕೆಯ ಅಂಗವಾಗಿ ಜಿಲ್ಲೆಯ ರಾಜ್ಯ, ಸಿಬಿಎಸ್‌ಇ, ಐಸಿಎಸ್‌ಸಿ ಶಾಲೆಗಳು, ಕೇಂದ್ರೀಯ ವಿದ್ಯಾಲಯಗಳು, ಅಂಗನವಾಡಿಗಳು ಮತ್ತು ಮದರಸಾಗಳು ಇತ್ಯಾದಿಗಳಿಗೆ ಇಂದು (ಜುಲೈ 4 ರಂದು) ಜಿಲ್ಲಾಧಿಕಾರಿ ಕೆ.ಇನ್ಬಶೇಖರ್ ರಜೆ ಘೋಷಿಸಿದ್ದಾರೆ.

ರಜೆಯಿಂದ ನಷ್ಟಗೊಳ್ಳುವ ಅಧ್ಯಯನ ಸಮಯವನ್ನು ಹೊಂದಿಸಲು ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಸೂಕ್ತ ವ್ಯವಸ್ಥೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಆದರೆ ಈ ರಜೆ ಕಾಲೇಜುಗಳಿಗೆ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!