ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ರಾಜಧಾನಿ ಬೆಂಗಳೂರಿನಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದು, ನಗರದ ಹಲವು ಭಾಗಗಳಲ್ಲಿ ರಸ್ತೆಯೇ ಹೊಳೆಯಾಗಿದೆ.
ಹಲವೆಡೆ ತಗ್ಗು ಪ್ರದೇಶಗಳಲ್ಲಿ ಮನೆಗಳಿಗೂ ನೀರು ನುಗ್ಗಿದ್ದು, ಮಳೆಯ ತೀವ್ರತೆಗೆ ಕೆಲವೆಡೆ ಮನೆಗಳು ಉರುಳಿಬಿದ್ದಿದೆ.
ಮಳೆಗಾಲ ಆರಂಭದಿಂದಲೇ ತೀವ್ರವಾಗಿ ಮಳೆ ಸುರಿದಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ವಿಲ್ಸನ್ ಗಾರ್ಡನ್, ಶಾಂತಿನಗರ, ಯಶವಂತಪುರ, ಪೀಣ್ಯ, ಮಲ್ಲೇಶ್ವರ, ರಾಜಾಜಿನಗರ, ವಿಜಯನಗರ, ಬಸವೇಶ್ವರನಗರ, ಮಹಾಲಕ್ಷ್ಮಿ ಬಡಾವಣೆ, ಆರ್.ಟಿ.ನಗರ, ಹೆಬ್ಬಾಳ, ಶಿವಾಜಿನಗರ, ಅಶೋಕನಗರ, ಎಂ.ಜಿ.ರಸ್ತೆ, ಕೋರಮಂಗಲ, ಮಡಿವಾಳ, ಬನಶಂಕರಿ, ಬಸವನಗುಡಿ, ಹನುಮಂತನಗರ, ಗಿರಿನಗರ, ದೀಪಾಂಜಲಿ ನಗರ, ರಾಜರಾಜೇಶ್ವರಿ ನಗರ, ಮೈಸೂರು ರಸ್ತೆ ಭಾಗಗಳಲ್ಲಿ ಹೆಚ್ಚಿನ ಮಳೆಯಾಗಿದೆ.