spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆ: ಇನ್ನೂ ಮುಂದುವರಿಯಲಿದೆಯಾ ವರುಣನ ಆರ್ಭಟ?

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ರಾಜ್ಯಾದ್ಯಂತ ಅಲ್ಲಲ್ಲಿ ಮಳೆಯಾಗುತ್ತಿದ್ದು, ನಾಳೆ ಬೆಳಗ್ಗೆ 8 ಗಂಟೆವರೆಗಿನ ಹವಾಮಾನ ವರದಿ ಇಲ್ಲಿದೆ.. ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಕೊಡಗು ಆಗಾಗ ಸ್ವಲ್ಪ ತುಂತುರು ಮಳೆಯ ಸಾಧ್ಯತೆ ಇದೆ.

ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಮೈಸೂರು ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಮತ್ತು ಆಗಾಗ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಮುಂಗಾರು : ದುರ್ಬಲ ಮುಂಗಾರು ಮುಂದುವರಿಯುವ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ 23ರ ವರೆಗೆ ಇದೇ ವಾತಾವರಣ ಮುಂದುವರಿದು 24ರಿಂದ ಬಿಸಿಲು ಮತ್ತು ಮೋಡದ ವಾತಾವರಣದ ಮುನ್ಸೂಚನೆ ಇದೆ. ಜೂನ್ 30 ರಿಂದ ಕರಾವಳಿ ಭಾಗಗಳಲ್ಲಿ ಪುನಃ ಮಳೆ ಆರಂಭವಾಗುವ ಮುನ್ಸೂಚನೆ ಇದೆ.

ಹವಾಮಾನ ಮಾಹಿತಿ: ಸಾಯಿಶೇಖರ್ ಕರಿಕ್ಕಳ

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss