Friday, August 19, 2022

Latest Posts

ಕರ್ನಾಟಕದ ಹಲವೆಡೆ ಇದ್ದಕ್ಕಿದ್ದಂತೆ ಮೋಡದ ವಾತಾವರಣ, ಎಲ್ಲೆಲ್ಲಿ ಮಳೆ ಸಾಧ್ಯತೆ?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ರಾಜ್ಯಾದ್ಯಂತ ಅಲ್ಲಲ್ಲಿ ಮಳೆಯಾಗುತ್ತಿದ್ದು, ನಾಳೆ ಬೆಳಗ್ಗೆ 8 ಗಂಟೆವರೆಗಿನ ಹವಾಮಾನ ವರದಿ ಇಲ್ಲಿದೆ.. ದಕ್ಷಿಣ ಕನ್ನಡದ ಮಂಗಳೂರು, ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಕಾರ್ಕಳ ತಾಲ್ಲೂಕಿನ ಹೆಚ್ಚಿನ ಭಾಗಗಳಲ್ಲಿ ಒಂದೆರಡು ಮಳೆಯ ಮುನ್ಸೂಚನೆ ಇದೆ. ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಕಾಸರಗೋಡು ಜಿಲ್ಲೆಯಾದ್ಯಂತ ಸಹ ಒಂದೆರಡು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಕೊಡಗು, ಮೈಸೂರು, ಚಾಮರಾಜನಗರ ಕೆಲವು ಭಾಗಗಳಲ್ಲಿ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಹಾವೇರಿ, ಗದಗ, ಕೊಪ್ಪಳ, ರಾಯಚೂರು, ಬಳ್ಳಾರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಮುಂಗಾರು : ಈಗನ ಮುನ್ಸೂಚನೆಯಂತೆ ಜುಲೈ 9ನೇ ತಾರೀಕಿನಿಂದ ಕರಾವಳಿ ಭಾಗಗಳಲ್ಲಿ ಮುಂಗಾರು ಚುರುಕುಗೊಂಡು ಉತ್ತಮ ಮಳೆಯಾಗಲಿದೆ.ಮಲೆನಾಡು ಭಾಗಗಳಲ್ಲಿಯೂ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಈ ವೇಳೆಗೆ ಉತ್ತರ ಹಾಗೂ ದಕ್ಷಿಣ ಒಳನಾಡುಗಳಲ್ಲಿ ಮಳೆ ಕಡಿಮೆಯಾಗಬಹುದು.

ಹವಾಮಾನ ಮಾಹಿತಿ: ಸಾಯಿಶೇಖರ್ ಕರಿಕ್ಕಳ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!