Wednesday, August 17, 2022

Latest Posts

ರಾಜ್ಯದ ಹಲವು ಭಾಗಗಳಲ್ಲಿ ಮಳೆ ವಾತಾವರಣ, ಎಲ್ಲೆಲ್ಲಿ ಮಳೆ ಸಾಧ್ಯತೆ?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ರಾಜ್ಯಾದ್ಯಂತ ಅಲ್ಲಲ್ಲಿ ಮಳೆಯಾಗುತ್ತಿದ್ದು, ನಾಳೆ ಬೆಳಗ್ಗೆ 8 ಗಂಟೆವರೆಗಿನ ಹವಾಮಾನ ವರದಿ ಇಲ್ಲಿದೆ..
ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಉತ್ತರ ಕನ್ನಡದ ಕರಾವಳಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಕೊಡಗಿನ ಅಲ್ಲಲ್ಲಿ, ಮೈಸೂರು, ಚಾಮರಾಜನಗರ ಕೆಲವು ಭಾಗಗಳಲ್ಲಿ, ಮಂಡ್ಯ, ತುಮಕೂರು, ಚಿಕ್ಕಮಗಳೂರು ಕೆಲವು ಭಾಗಗಳಲ್ಲಿ, ಚಿಕ್ಕಬಳ್ಳಾಪುರ ಕೆಲವು ಭಾಗಗಳಲ್ಲಿ, ಚಿತ್ರದುರ್ಗ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ ಕೆಲವು ಭಾಗಗಳಲ್ಲಿ ರಾಯಚೂರು ಜಿಲ್ಲೆಯ ಅಲ್ಲಲ್ಲಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಮುಂಗಾರು : ಇವತ್ತಿನಿಂದ ಮುಂದಿನ 10 ದಿನಗಳವರೆಗೂ ಕರ್ನಾಟಕ ಹಾಗೂ ಕೇರಳ ಕರಾವಳಿ ಜಿಲ್ಲೆಗಳಾದ್ಯಂತ ಮುಂಗಾರು ಚುರುಕುಗೊಂಡು ಉತ್ತಮ ಮಳೆಯ ಮುನ್ಸೂಚೆನೆ ಇದೆ.

ಹವಾಮಾನ ಮಾಹಿತಿ: ಸಾಯಿಶೇಖರ್ ಕರಿಕ್ಕಳ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!