Thursday, August 11, 2022

Latest Posts

ರಾಜ್ಯದ ಹಲವು ಭಾಗದಲ್ಲಿ ಸೋನೆ ಮಳೆ, ಚಳಿ… ಯಾವ್ಯಾವ ಭಾಗದಲ್ಲಿ ಇನ್ನಷ್ಟು ವರ್ಷಧಾರೆ?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ರಾಜ್ಯಾದ್ಯಂತ ಅಲ್ಲಲ್ಲಿ ಮಳೆಯಾಗುತ್ತಿದ್ದು, ನಾಳೆ ಬೆಳಗ್ಗೆ 8 ಗಂಟೆವರೆಗಿನ ಹವಾಮಾನ ವರದಿ ಇಲ್ಲಿದೆ.. ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ, ಹಾಗೂ ಉತ್ತರ ಕನ್ನಡ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ.

ಕೊಡಗು, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಮುಂಗಾರು : 15ನೇ ತಾರೀಕಿನಂದು ಕೊಡಗು red alert, 16ನೇ ತಾರೀಕಿನಂದು ಕೊಡಗು, ಆಗುಂಬೆ ಹಾಗೂ ಗೋವಾ red alert, 17ರಂದು ಉತ್ತರ ಕನ್ನಡ ಹಾಗೂ ಗೋವಾ red alert, 18ರಂದು ಗೋವಾ red alert ಮುನ್ಸೂಚನೆ ಇದೆ. ಮುಂಬೈ ಇವತ್ತು ಮತ್ತು ನಾಳೆ red alert ಮುನ್ಸೂಚನೆ ಇದೆ.

ಹವಾಮಾನ ಮಾಹಿತಿ: ಸಾಯಿಶೇಖರ್ ಕರಿಕ್ಕಳ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss