Wednesday, August 10, 2022

Latest Posts

ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆ ಮುನ್ಸೂಚನೆ… ಎಲ್ಲೆಲ್ಲಿ ಜೋರು ಮಳೆ?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ರಾಜ್ಯಾದ್ಯಂತ ಅಲ್ಲಲ್ಲಿ ಮಳೆಯಾಗುತ್ತಿದ್ದು, ನಾಳೆ ಬೆಳಗ್ಗೆ 8 ಗಂಟೆವರೆಗಿನ ಹವಾಮಾನ ವರದಿ ಇಲ್ಲಿದೆ.. ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೊಡಗು ಸಹ ಉತ್ತಮ ಮಳೆಯ ಮುನ್ಸೂಚನೆ ಇದೆ.
ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್, ಗುಲ್ಬರ್ಗ, ಚಾಮರಾಜನಗರ, ಮೈಸೂರು, ರಾಮನಗರ, ಹಾಸನ, ಬೆಂಗಳೂರು, ತುಮಕೂರು, ಪಾವಗಢ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಬೆಂಗಳೂರು ಸ್ವಲ್ಪ ಜಾಸ್ತಿ ಮಳೆ ಇರುವ ಸಾಧ್ಯತೆ ಇದೆ. ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಮುಂಗಾರು : ಜುಲೈ 18ರ ನಂತರ ಮಲೆನಾಡು ಹಾಗೂ ಒಳನಾಡಿನ ಭಾಗಗಳಲ್ಲಿ ಮಳೆ ಕಡಿಮೆಯಾದರೆ ಕರಾವಳಿ ಭಾಗಗಳಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.

ಹವಾಮಾನ ಮಾಹಿತಿ: ಸಾಯಿಶೇಖರ್ ಕರಿಕ್ಕಳ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss