ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ರಾಜ್ಯಾದ್ಯಂತ ಅಲ್ಲಲ್ಲಿ ಮಳೆಯಾಗುತ್ತಿದ್ದು, ನಾಳೆ ಬೆಳಗ್ಗೆ 8 ಗಂಟೆವರೆಗಿನ ಹವಾಮಾನ ವರದಿ ಇಲ್ಲಿದೆ.. ಕರ್ನಾಟಕ ಕರಾವಳಿ ಜಿಲ್ಲೆಗಳಾದ್ಯಂತ ಹಾಗೂ ಕಾಸರಗೋಡು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಕೊಡಗು, ಸಕ್ಲೇಶ್ಪುರ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲಾ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಮುಂಗಾರು : ಇಂದು ತಡ ರಾತ್ರಿ ಪಶ್ಚಿಮ ಬಂಗಾಳದ ಕರಾವಳಿ ಭಾಗದಲ್ಲಿ ಉಂಟಾಗುವ ವಾಯುಭಾರ ಕುಸಿತವು ನಿರೀಕ್ಷೆಗಿಂತ ಕಡಿಮೆ ಪ್ರಭಲವಾಗಿರುವ ಸಾಧ್ಯತೆ ಇದೆ ಮತ್ತು 22ನೇ ತಾರೀಕು ರಾತ್ರಿ ಶಿಥಿಲಗೊಳ್ಳುವ ಮುನ್ಸೂಚೆನೆ ಇದೆ. ಕರ್ನಾಟಕಕ್ಕೆ ಅಷೇನು ಪರಿಣಾಮಗಳು ಕಾಣಿಸುತ್ತಿಲ್ಲ. ಈಗಿನ ಮಳೆಯ ವಾತಾವರಣವು ಕರಾವಳಿ ಭಾಗಗಳಲ್ಲಿ 27ರ ವರೆಗೆ ಮುಂದುವರಿಯುವ ಸಾಧ್ಯತೆ ಇದ್ದು, ಆಮೇಲೆ ಕಡಿಮೆ ಆಗುವ ಮುನ್ಸೂಚನೆ ಇದೆ.
ಹವಾಮಾನ ಮಾಹಿತಿ: ಸಾಯಿಶೇಖರ್ ಕರಿಕ್ಕಳ