ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯದಲ್ಲಿ ಇನ್ನೂ ಮುಂದುವರಿಯಲಿದೆ ಮಳೆ ಅಬ್ಬರ: ಯಾವ ಜಿಲ್ಲೆಗಳಲ್ಲಿ ಜೋರು ಮಳೆ?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ರಾಜ್ಯಾದ್ಯಂತ ಅಲ್ಲಲ್ಲಿ ಮಳೆಯಾಗುತ್ತಿದ್ದು, ನಾಳೆ ಬೆಳಗ್ಗೆ 8 ಗಂಟೆವರೆಗಿನ ಹವಾಮಾನ ವರದಿ ಇಲ್ಲಿದೆ.. ಬಂಗಾಳಕೂಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಇವತ್ತು ಸಹ ರಾಜ್ಯದ ಹಲವೆಡೆ ಮಳೆಯ ಮುನ್ಸೂಚನೆ ಇದೆ.

ರಾಜ್ಯದ ಕರಾವಳಿ ಜಿಲ್ಲೆಗಳಾದ್ಯಂತ, ಕಾಸರಗೋಡು, ಕೊಡಗು, ಬೀದರ್ ಹಾಗೂ ಗುಲ್ಬರ್ಗ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಪಾವಗಢ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ.

ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.

ಮುಂಗಾರು : ವಾಯುಭಾರ ಕುಸಿತವು ಇವತ್ತು ರಾತ್ರಿ ಶಿಥಿಲಗೊಳ್ಳುವ ಸಾಧ್ಯತೆ ಇದ್ದು. ನಾಳೆಯಿಂದ ಮಳೆ ಕಡಿಮೆ ಆಗುವ ಮುನ್ಸೂಚೆನೆ ಇದೆ. ಕರಾವಳಿ ಭಾಗಗಳಲ್ಲಿಯೂ ಮಳೆ ಕಡಿಮೆ ಆಗುವ ಮುನ್ಸೂಚೆನೆ ಇದ್ದರೂ ಜುಲೈ 30ರ ವರೆಗೆ ಮಳೆ ಮುಂದುವರಿಯುವ ಸಾಧ್ಯತೆ ಇದೆ.

27ರ ನಂತರ ಅಡಿಕೆಗೆ ಔಷಧಿ ಬಿಡಿಸುವವರಿಗೆ ಅನುಕೂಲ ವಾತಾವರಣದ ಮುನ್ಸೂಚೆನೆ ಇದೆ. ಆದರೂ 30ರ ತನಕ ದಿನಕ್ಕೆ ಒಂದೆರಡು ಮಳೆಯ ಸಾಧ್ಯತೆ ಇದೆ.

ಹವಾಮಾನ ಮಾಹಿತಿ: ಸಾಯಿಶೇಖರ್ ಕರಿಕ್ಕಳ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss