ಹೊಸದಿಗಂತ ಆನ್ಲೈನ್ ಡೆಸ್ಕ್:
ಮುಂದಿನ ಎರಡು ದಿನ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಶಿವಮೊಗ್ಗ, ಹಾಸನ ಭಾಗಕ್ಕೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಕರ್ನಾಟಕದ ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಳಗಾವಿ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.