ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಹಿಂಗಾರು ಮಳೆ ಆರಂಭವಾಗಿದ್ದು, ಇಂದಿನಿಂದ ನ.6 ರವರೆಗೆ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದೆ. ಮಳೆ ಜೊತೆಗೂ ಗುಡುಗು ಸಂಭವವೂ ಇದೆ. ಮಲೆನಾಡು ಭಾಗಗಳ ಜೊತೆ ಚಾಮರಾಜನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ರಾಮನಗರ ಹಾಗೂ ಮೈಸೂರಿನಲ್ಲಿಯೂ ಮಳೆ ಹೆಚ್ಚಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.