ಕರಾವಳಿ, ಮಲೆನಾಡು ಭಾಗಗಳಲ್ಲಿ ಮುಂದಿನ ಎರಡು ದಿನ ಮಳೆ ಮುನ್ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 
ಅರಬ್ಬಿ ಸಮುದ್ರಲ್ಲಿ ಮತ್ತೆ ವಾಯುಭಾರ ಕುಸಿತ ಮಾದರಿಯ ಬೆಳವಣಿಗೆ ಕಾಣಿಸಿದ್ದು, ಇದರ ಪರಿಣಾಮವಾಗಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯ ಸಾಧ್ಯತೆ ಇದೆ.
ಏ.24ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯಂತೆ ಕೊಡಗು ಹಾಗೂ ಆಗುಂಬೆ ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.
ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜೆಲ್ಲೆಗಳಾದ್ಯಂತ ಅಲ್ಲಲ್ಲಿ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ ಭಾಗದ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ.
ಅರಬ್ಬಿ ಸಮುದ್ರದಲ್ಲಿ ಕಳೆದ ಕೆಲವು ದಿನಗಳಿಂದ ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ಇದರಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಶುಕ್ರವಾರ ಗುಡುಗು, ಸಿಡಿಲಿನ ಸಹಿತ ಅನಿರೀಕ್ಷಿತ ಭರ್ಜರಿ ಮಳೆಯಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!