ರಾಜ್ಯದಲ್ಲಿ ಮುಂದಿನ 5 ದಿನ ಗುಡುಗು, ಮಿಂಚು ಸಹಿತ ಮಳೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಮತ್ತೆ ಮಳೆ ಬರುವ ಮುನ್ಸೂಚನೆ ಇದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ ಹಾಗೂ ಚಾಮರಾಜನಗರ, ರಾಮನಗರ, ಕೋಲಾರದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ (Karnataka Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಧ್ಯಪ್ರದೇಶದಿಂದ ತಮಿಳುನಾಡಿನಲ್ಲಿ 9 ಮೀಟರ್ ಗಾಳಿಯ ದಿಕ್ಕಿನ ಬದಲಾವಣೆ ಹಿನ್ನೆಲೆ 5 ದಿನ ಮಳೆಯಾಗುವ (Karnataka Rain) ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನಲ್ಲಿ ಇಂದಿನಿಂದ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದ್ದು, ಬೆಂಗಳೂರಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಇಂದು ಮೋಡ ಕವಿದ ವಾತಾವರಣ ಹಾಗೂ ಗಾಳಿಯ ಪ್ರಮಾಣ ಹೆಚ್ಚಾಗಿರಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!