ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್‌ರೈಡರ್ಸ್ ನಡುವೆ ಇಂದು ನಡೆಯಲಿರುವ ಮೊದಲ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆಯಿದೆ.
ಬೆಳಗ್ಗೆಯಿಂದಲೇ ಕೋಲ್ಕತ್ತಾದಲ್ಲಿ ಜಿಟಿಜಿಟಿ ಮಳೆಯಾಗುತ್ತಿದೆ. ಇದೇ ರೀತಿಯ ಮಳೆ ರಾತ್ರಿಯು ಸುರಿಯುವ ಸಾಧ್ಯತೆಯಿದೆ ಎನ್ನಲಾಗಿದೆ.
ಐಪಿಎಲ್ ಪಂದ್ಯ 7:30ಕ್ಕೆ ಆರಂಭವಾಗುತ್ತದೆ. ಪಂದ್ಯಕ್ಕೂ ಮೊದಲು ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಶ್ರೇಯಾ ಘೋಷಾಲ್, ದಿಶಾ ಪಟಾನಿ, ಶಾರೂಖ್ ಖಾನ್ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.