ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆರಾಯನ ಆರ್ಭಟ ಶುರುವಾಗಿದೆ. ನಗರದ ಮೆಜೆಸ್ಟಿಕ್, ಕಾರ್ಪೊರೇಷನ್, ಕೋರಮಂಗಲ, ಆಡುಗೋಡಿ, ಮಡಿವಾಳ, ಬನ್ನೇರುಘಟ್ಟ ರಸ್ತೆ ಸೇರಿದಂತೆ ಹಲವೆಡೆ ಜೋರು ಮಳೆ ಸುರಿದಿದೆ. ದಿಢೀರ್ ಮಳೆಯಿಂದ ವಾಹನ ಸವಾರರು ಪರದಾಡಿದ್ದಾರೆ.
ಮಧ್ಯಾಹ್ನದ ಬಳಿಕ ಮಳೆರಾಯ ಎಂಟ್ರಿಕೊಟ್ಟ ಹಿನ್ನೆಲೆ ಮೆಜೆಸ್ಟಿಕ್, ಕೆಆರ್ ಸರ್ಕಲ್, ವಿಧಾನ ಸೌಧ ಸುತ್ತಮುತ್ತ ಬಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಜಾಮ್ನಲ್ಲಿ ಸಿಲುಕಿ ದ್ವಿಚಕ್ರ ವಾಹನ ಸವಾರರು ಪರದಾಟ ನಡೆಸಿದ್ದಾರೆ.