October 10, 2026
Saturday, October 10, 2026
spot_img

WEATHER | ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲ ರಾಜ್ಯಗಳಲ್ಲಿಯೂ ಮೇ.9ರ ವರೆಗೆ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಮೇ ಒಂಬತ್ತರವರೆಗೆ ಜೋರು ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಬಿರುಗಾಳಿ, ಗುಡುಗು ಸಹಿತ ಮಳೆ ಬೀಳಲಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿಯಲ್ಲಿ ಸಾಮಾನ್ಯ ಮಳೆ ಬೀಳಲಿದೆ. ಇನ್ನು ಬಾಗಲಕೋಟೆ, ಗದಗ, ಹಾವೇರಿ, ವಿಜಯಪುರ, ಬೆಳಗಾವಿ, ಬೀದರ್‌ ಹಾಗೂ ಧಾರವಾಡದಲ್ಲಿ ಎರಡು ದಿನ ಒಣಹವೆ ಇರಲಿದೆ.

ರಾಜ್ಯದಲ್ಲಿ ಬಿಸಿಲು ಹಾಗೂ ಮಳೆ ಬೀಳುತ್ತಿದ್ದು, ಆರೋಗ್ಯದ ಕಡೆ ಗಮನಹರಿಸಬೇಕಿದೆ.

Must Read