ರಾಜ್ಯದಲ್ಲಿ ಮುಂದುವರೆದ ವರುಣನ ಆಟ; ಇಂದು ಹಲವೆಡೆ ಮಳೆ ಮುನ್ಸೂಚನೆ

ಹೊಸದಿಗಂತ ವರದಿ, ಮಂಗಳೂರು
ಕರಾವಳಿ ಜಿಲ್ಲೆಗಳ ಸಹಿತ ರಾಜ್ಯದ ಹಲವೆಡೆಗಳಿಗೆ ವರುಣಕೃಪೆಯಾಗಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಕೊಡಗು, ಆಗುಂಬೆ, ಶಿೃಂಗೇರಿ ಭಾಗಗಳಲ್ಲಿ ಇಂದು ಮಳೆಯ ಮುನ್ಸೂಚನೆ ಇದೆ.
ಕಾಸರಗೋಡು ಸೇರಿದಂತೆ ಕರಾವಳಿ ಜಿಲ್ಲೆಗಳಾದ್ಯಂತ ಅಲ್ಲಲ್ಲಿ ಮಳೆ‌ಸುರಿಯುವ ಸಾಧ್ಯತೆಯಿದ್ದು,ಚಿಕ್ಕಮಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ಸಾಧಾರಣ ಮಳೆಯ ಸಾಧ್ಯತೆ ನಿರೀಕ್ಷಿಸಲಾಗಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!